HomeKarnatakaಐಟಿಸಿ ಕಂಪನಿಯ ನಕಲಿ ಸಿಗರೇಟ್, ಹನ್ಸ್ ಮಾರಾಟ: ಸಿಸಿಬಿ ದಾಳಿ

ಐಟಿಸಿ ಕಂಪನಿಯ ನಕಲಿ ಸಿಗರೇಟ್, ಹನ್ಸ್ ಮಾರಾಟ: ಸಿಸಿಬಿ ದಾಳಿ

ಮೈಸೂರು: ಐಟಿಸಿ ಕಂಪನಿಯ ಸಿಗರೇಟ್ ಮತ್ತು ಉತ್ಪನ್ನಗಳನ್ನು ಕಂಪನಿಯ ಹಕ್ಕು ಸ್ವಾಮ್ಯತೆ ಉಲ್ಲಂಘಿಸಿ ನಕಲಿ ಉತ್ಪನ್ನಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಹಾಗೂ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ಸಂದರ್ಭದಲ್ಲಿ 70 ಲಕ್ಷ ರೂಪಾಯಿ ಮೌಲ್ಯದ ನಕಲಿ ಉತ್ಪನ್ನ ವಶಕ್ಕೆ ಪಡೆಯಲಾಗಿದೆ. ಐಟಿಸಿ ಕಂಪನಿಯ ಉತ್ಪನ್ನಗಳನ್ನು ಅಕ್ರಮವಾಗಿ ತಯಾರಿಸಿ ಮಾರಾಟ ಮಾಡುತ್ತಿರುವುದಾಗಿ ಕಂಪನಿಯ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ.

ಜುಲೈ 22ರಂದು ಮೈಸೂರು ಇಟ್ಟಿಗೆಗೂಡಿನ ಅರುಣಾಚಲಂ ಸ್ಟ್ರೀಟ್ ನಲ್ಲಿರುವ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು,  ನಕಲಿ ಉತ್ಪನ್ನಗಳನ್ನು ಮತ್ತು ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆತನ ವಿಚಾರಣೆ ನಡೆಸಿದಾಗ ಹೆಚ್ಚಿನ ಮಾಹಿತಿ ಗೊತ್ತಾಗಿದೆ. ನಂಜನಗೂಡು ರಿಂಗ್ ರಸ್ತೆ ಬಳಿ ನಕಲಿ ಹನ್ಸ್ ಮತ್ತೊಬ್ಬ ಆರೋಪಿ ಮತ್ತು ತಂಬಾಕು ತಯಾರಿಸುತ್ತಿದ್ದ ಕೋಟೆಹುಂಡಿ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ ಮತ್ತಿಬ್ಬರು ಆರೋಪಿಗಳು ಸೇರಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular