ಕಲಬುರಗಿಯಲ್ಲಿ ಟೆನಿಸ್ ಕಲರವ: ನ. 26 ರಿಂದ ಐಟಿಎಫ್ ಓಪನ್ ಟೆನಿಸ್ ಟೂರ್ನಿ

ಕಲಬುರಗಿ: ಕಲಬುರಗಿಯಲ್ಲಿ ಇದೇ ನವೆಂಬರ್ 26 ರಿಂದ ಡಿಸೆಂಬರ್ 3ರ ವರೆಗೆ  ಐಟಿಎಫ್ ಕಲಬುರಗಿ ಓಪನ್ ಮೆನ್ಸ್ ಲಾನ್ ಟೆನಿಸ್ ಟೂರ್ನಿಮೆಂಟ್-2023 ಸಂಘಟಿಸಲಾಗುತ್ತಿದ್ದು, ಟೆನಿಸ್ ಕ್ರೀಡಾಕೂಟ ಯಶಸ್ಸಿಗೆ ಎಲ್ಲಾ ಸಮಿತಿಗಳು ಕಾರ್ಯೋನ್ಮುಖವಾಗಬೇಕು ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಹೇಳಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಟೆನಿಸ್ ಟೂರ್ನಾಮೆಂಟ್ ಆಯೋಜನೆ‌ ಸಂಬಂಧ ರಚಿಸಲಾಗಿರುವ ವಿವಿಧ ಸಮಿತಿಗಳ ಮುಖ್ಯಸ್ಥರಾಗಿರುವ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಅಂತರಾಷ್ಟ್ರೀಯ ಖ್ಯಾತಿಯ ಆಟಗಾರರು ಇದರಲ್ಲಿ ಭಾಗವಹಿಸಲಿದ್ದು, ಎಲ್ಲಿಯೂ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದರು.

ಕಲಬುರಗಿ‌ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಈ ಕ್ರೀಡಾಕೂಟ ನಡೆಯಲಿದೆ.  ಕ್ರೀಡಾಪಟುಗಳಿಗೆ ವಸತಿ, ಊಟೋಪಚಾರ, ಸಾರಿಗೆ, ಭದ್ರತೆ ವ್ಯವಸ್ಥೆಯಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು. ಟೂರ್ನಿಮೆಂಟ್ ಕುರಿತು ಟೀಸರ್, ಪ್ರೊಮೋಷನ್  ಕಾರ್ಯ ಕೂಡಲೆ ಚುರುಕುಗೊಳಿಸಬೇಕು. ಸಾಮಾಜಿಕ ಜಾಲತಾಣ ಮೂಲಕ ಹೆಚ್ಚಿನ ಪ್ರಚಾರ ನೀಡಬೇಕು ಎಂದರು.

ಕ್ರೀಡಾಕೂಟ ಯಶಸ್ಸಿಗೆ ಈಗಾಗಲೆ ಸ್ವಾಗತ, ಹಣಕಾಸು, ಸಾರಿಗೆ, ಪ್ರಚಾರ, ಮನರಂಜನಾ, ವಸತಿ, ಆರೋಗ್ಯ, ಭದ್ರತಾ, ಕುಡಿಯುವ ನೀರು ಮತ್ತು ಸ್ವಚ್ಛತೆ, ಅಗ್ನಿಶಾಮಕ ಹೀಗೆ ಒಟ್ಟಾರೆ 14 ಸಮಿತಿ ರಚಿಸಿ ಜವಾಬ್ದಾರಿ ನೀಡಿದ್ದು, ಅದರಂತೆ ಸಮಿತಿಯಲ್ಲಿರುವ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಬಿ.ಫೌಜಿಯಾ ತರನ್ನುಮ್ ಸೂಚಿಸಿದರು.

ನ.28 ರಿಂದ ಮುಖ್ಯ ಪಂದ್ಯಗಳು:

ನವೆಂಬರ್ 26 ಮತ್ತು 27 ರಂದು ಅರ್ಹತಾ ಪಂದ್ಯಗಳು ನಡೆಯಲಿವೆ. ನವೆಂಬರ್ 28 ರಿಂದ ಮುಖ್ಯ ಪಂದ್ಯ ನಡೆಯಲಿದ್ದು, ಡಿಸೆಂಬರ್ 2 ರಂದು ಮೆನ್ಸ್ ಡಬಲ್ ಮತ್ತು ಡಿಸೆಂಬರ್ 3 ರಂದು ಮೆನ್ಸ್ ಸಿಂಗಲ್ ಫೈನಲ್ ಪಂದ್ಯ ನಡೆಯಲಿದೆ. ಸುಮಾರು 75 ಜನ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಕಲಬುರಗಿ ಓಪನ್ ಟೆನಿಸ್ ಟೂರ್ನಿಯಲ್ಲಿ ಭಾಗವಹಿಸುವ ನಿರೀಕ್ಷೆ ಹೊಂದಿದ್ದೇವೆ ಎಂದು ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್ ಸಂಸ್ಥೆಯ ಟೂರ್ನಾಮೆಂಟ್ ನಿರ್ದೇಶಕ ಪೀಟರ್ ವಿಜಯಕುಮಾರ ಅವರು ಸಭೆಗೆ ಇವೆಂಟ್ ಮಾಹಿತಿ ನೀಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಗಜಾನನ್ ಬಾಳೆ, ಯುವ ಸಬಲೀಕರಣ‌ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ ಸೇರಿದಂತೆ‌ ವಿವಿಧ. ಸಮಿತಿ‌ ಮುಖ್ಯಸ್ಥರು, ಕೆ.ಎಸ್.ಎಲ್.ಟಿ.ಎ. ಸಂಸ್ಥೆಯ ಇತರೆ ಅಧಿಕಾರಿಗಳು ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read