HomeLatest News'ITI' ಪಾಸಾದವರಿಗೆ ಗುಡ್ ನ್ಯೂಸ್ : 'KPCL' ನಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

‘ITI’ ಪಾಸಾದವರಿಗೆ ಗುಡ್ ನ್ಯೂಸ್ : ‘KPCL’ ನಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ವತಿಯಿಂದ ಕುಡತಿನಿಯಲ್ಲಿನ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ನಿಗದಿತ ಮಾಸಿಕ ವೇತನದೊಂದಿಗೆ ಒಂದು ವರ್ಷ ಅವಧಿ ಶಿಶಿಕ್ಷು ತರಬೇತಿ ನೀಡಲು ಅರ್ಹ ಐಟಿಐ ಮತ್ತು ಐಟಿಐಯೇತರ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು www.apprenticeshipindia.org (skil india, NAPS) ಈ ವೆಬ್‌ಸೈಟ್‌ನಲ್ಲಿ BALLARI THERMAL POWER STATION KUDATHINI BALLARI (DIST) ಎಸ್ಟಾಬ್ಲಿಷ್‌ಮೆಂಟ್ [E07162900015] ಗೆ ಅಕ್ಟೋಬರ್ 18 ರ ಸಂಜೆ 05 ಗಂಟೆಯೊಳಗಾಗಿ ತಮ್ಮ ವೃತ್ತಿಗನುಗುಣವಾಗಿ ಎಲ್ಲಾ ವಿವರಗಳೊಂದಿಗೆ ಆಯಾ ವೃತ್ತಿಗಳಲ್ಲೇ ಅರ್ಜಿ ಸಲ್ಲಿಸಬೇಕು.

*ಶಿಶಿಕ್ಷು ವೃತ್ತಿ ಸಂಖ್ಯೆ ಮತ್ತು ಶಿಷ್ಯವೇತನ:*

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಟಿಐ ಎಲೆಕ್ಟಿಷಿಯನ್-8, ಐಟಿಐ ಫಿಟ್ಟರ್-7, ಐಟಿಐ ಟರ್ನರ್-2, ಐಟಿಐ ವೆಲ್ಡರ್-3, ಐಟಿಐ ಕೊಪಾ (ಪಾಸಾ)-4. ಶಿಷ್ಯವೇತನ ರೂ.10 ಸಾವಿರ.

ಎಫ್‌ಓಎ(ಎಸ್‌ಎಸ್‌ಎಲ್‌ಸಿ ಮತ್ತು ಕಂಪ್ಯೂಟರ್)-16, ಹೌಸ್ ಕೀಪರ್-18. ಶಿಷ್ಯವೇತನ ರೂ.7 ಸಾವಿರ.

*ಬೇಕಾದ ದಾಖಲೆಗಳು:*

ಅಭ್ಯರ್ಥಿಯ ಸ್ವವಿವರ, ಆಧಾರ್ ಕಾರ್ಡ್, ವಿದ್ಯಾರ್ಹತೆಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ದೈಹಿಕಾ ಕ್ಷಮತಾ ಪತ್ರ, ಇತ್ತೀಚಿನ ನಾಲ್ಕು ಭಾವಚಿತ್ರ,

ತರೆ ದಾಖಲೆಯ ವಿವರದ ಪ್ರತಿ ಒದಗಿಸಬೇಕು.

*ಇತರೆ ನಿಯಮ:*

ಅಭ್ಯರ್ಥಿಗಳು ಕಡ್ಡಾಯವಾಗಿ ಚಾಲ್ತಿಯಲ್ಲಿರುವ ತಮ್ಮ ಸ್ವಂತ ಇ-ಮೇಲ್ ಐಡಿಯನ್ನು ಮಾತ್ರ ಅರ್ಜಿಯಲ್ಲಿ ಭರ್ತಿ ಮಾಡತಕ್ಕದ್ದು, ತರಬೇತಿಯ ಎಲ್ಲಾ ಪತ್ರ ವ್ಯವಹಾರವನ್ನು ನೀಡಿದಂತಹ ಇ-ಮೇಲ್ ಐಡಿ ಮುಖಾಂತರ ಮಾಡಲಾಗುವುದು.

ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಅದರ ಒಂದು ಪ್ರತಿಯನ್ನು ದಾಖಲೆಗಳೊಂದಿಗೆ ಈ ಕಚೇರಿಗೆ ಲಕೋಟೆಯ ಮೇಲೆ “ಶಿಶಿಕ್ಷು ತರಬೇತಿಗಾಗಿ ಅರ್ಜಿ” ಎಂದು ನಮೂದಿಸಿ ಸಲ್ಲಿಸತಕ್ಕದ್ದು, ಆಫ್‌ಲೈನ್ ಮೂಲಕ ಸಲ್ಲಿಸಿದ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಈಗಾಗಲೇ ಶಿಶಿಕ್ಷು ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಆನ್‌ಲೈನ್ ಅರ್ಜಿಗಳಲ್ಲಿ ಅಭ್ಯರ್ಥಿಗಳ ಮಾಹಿತಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳು ತಿರಸ್ಕೃತಗೊಳ್ಳುತ್ತವೆ.

ಶಿಶಿಕ್ಷು ತರಬೇತಿಗಾಗಿ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಶಿಶಿಕ್ಷು ಅಧಿನಿಯಮದಂತೆ ಕನಿಷ್ಟ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶಿಶಿಕ್ಷು ಕಾಯ್ದೆ ಪ್ರಕಾರ ಮೀಸಲಾತಿ ಇರುತ್ತದೆ. ನಿಗಮದ ಉದ್ಯೋಗಿಗಳ ಮಕ್ಕಳಿಗೆ ಶೇ.25 ರಷ್ಟು ಮೀಸಲಾತಿ ಇರುತ್ತದೆ.ತರಬೇತಿಯ ಅವಧಿ ಮುಗಿದ ನಂತರ ಶಿಶಿಕ್ಷುಗಳನ್ನು ಕೂಡಲೇ ಬಿಡುಗಡೆಗೊಳಿಸಲಾಗುವುದು ಹಾಗೂ ಯಾವುದೇ ಸಂದರ್ಭದಲ್ಲಿ ಶಿಶಿಕ್ಷುಗಳನ್ನು ನಿಗಮದ ಖಾಯಂ ಸೇವೆಗೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕುಡತಿನಿಯ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ, ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಕಚೇರಿ ಅಥವಾ ಮೊ.9141614694 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ, ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಉಪ ಪ್ರಧಾನ ಪ್ರಬಂಧಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular