HomeBusinessನಿಗದಿತ ಅವಧಿಯಲ್ಲಿ ITR ಸಲ್ಲಿಕೆ ಮಾಡಲು ಸಾಧ್ಯವಾಗದಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ...!

ನಿಗದಿತ ಅವಧಿಯಲ್ಲಿ ITR ಸಲ್ಲಿಕೆ ಮಾಡಲು ಸಾಧ್ಯವಾಗದಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ…!

Filing your income tax returns? Here are answers for five frequently asked questions

ಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಈಗಾಗಲೇ ಮುಕ್ತಾಯಗೊಂಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಿನಾಂಕ ವಿಸ್ತರಣೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಇದರಿಂದ ನಿರಾಸೆಯಾಗಿದೆ. ಅಂತವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಜುಲೈ 31ನ್ನು ಮಿಸ್ ಮಾಡಿಕೊಂಡವರಿಗೆ ಇದೀಗ ದಂಡ ಮತ್ತು ಬಡ್ಡಿ ಸಮೇತ 2023ರ ಡಿಸೆಂಬರ್ 31ರವರೆಗೆ ಆದಾಯ ತೆರಿಗೆ ರಿಟರ್ನ್ಸ್ (ಬಿಲೇಟೆಡ್ ರಿಟರ್ನ್ಸ್) ಸಲ್ಲಿಕೆಗೆ ಅವಕಾಶವಿದ್ದು, ತೆರಿಗೆ ಪಾವತಿದಾರರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

5 ಲಕ್ಷ ರೂಪಾಯಿಗಳಿಗಿಂತಲೂ ಅಧಿಕ ಆದಾಯ ಹೊಂದಿರುವವರು 5,000 ರೂಪಾಯಿ ಹಾಗೂ 5 ಲಕ್ಷ ರೂಪಾಯಿಗಳಿಗಿಂತಲೂ ಕಡಿಮೆ ಆದಾಯ ಹೊಂದಿರುವವರು 1,000 ರೂಪಾಯಿಗಳವರೆಗೆ ದಂಡ ಹಾಗೂ ಬಡ್ಡಿ ಪಾವತಿಸಿ ರಿಟರ್ನ್ಸ್ ಸಲ್ಲಿಸಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular