HomeKarnatakaಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರನಕ್ಕೆ ಸಂಬಂಧಿಸಿದಂತೆ ಹಿಂದೂಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಕಲ್ಲಡ್ಕ ದಿನೇಶ್ (20) ಹಾಗೂ ಭರತ್ (24) ಬಂಧಿತ ಆರೋಪಿಗಳು. ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಇಬ್ಬರನ್ನು ವಶಕ್ಕೆ ಪಡೆದು ಪಾಂಡವೇಶ್ವರ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಆರೋಪಿಗಳು, ರಾಜ್ಯಪಾಲರ ವಿರುದ್ಧ ಐವನ್ ಡಿಸೋಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಆಕ್ರೋಶಗೊಂಡು ಕಲ್ಲು ತೂರಾಟ ನಡೆಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನು ಬಂಧಿತ ಭರತ್ ವಿರುದ್ಧ ಹಲ್ಲೆ ಆರೋಪದಲ್ಲಿ ಈವರೆಗೆ 3 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular