ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ: 6 ವಲಸೆ ಕಾರ್ಮಿಕರು, ವೈದ್ಯನ ಹತ್ಯೆ

ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗುಂಡ್ ಪ್ರದೇಶದ ಗಗಂಗೀರ್‌ನಲ್ಲಿನ ಝಡ್-ಮೋಡ್ ಸುರಂಗದ ಕ್ಯಾಂಪ್‌ಸೈಟ್ ಬಳಿ ಭಾನುವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರು ಸ್ಥಳೀಯೇತರ ಕಾರ್ಮಿಕರು ಮತ್ತು ಒಬ್ಬ ವೈದ್ಯ ಸಾವನ್ನಪ್ಪಿದ್ದಾರೆ. ಐವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೇರ್-ಎ-ಕಾಶ್ಮೀರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(SKIMS). ಸುರಂಗ ನಿರ್ಮಾಣದಲ್ಲಿ ತೊಡಗಿರುವ ಖಾಸಗಿ ಕಂಪನಿಯೊಂದರ ಕಾರ್ಮಿಕರನ್ನು ಹೊಂದಿರುವ ಕಾರ್ಮಿಕರ ಶಿಬಿರದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಡಾ.ಶಹನವಾಜ್, ಫಹೀಮ್ ನಜೀರ್, ಕಲೀಂ, ಮೊಹಮ್ಮದ್ ಹನೀಫ್, ಶಶಿ ಅಬ್ರೋಲ್, ಅನಿಲ್ ಶುಕ್ಲಾ ಮತ್ತು ಗುರ್ಮೀತ್ ಸಿಂಗ್ ಎಂದು ಗುರುತಿಸಲಾಗಿದೆ.

ದಾಳಿಯನ್ನು ಖಂಡಿಸಿದ ಸಿಎಂ

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಅಮಾಯಕ ಕಾರ್ಮಿಕರ ಮೇಲೆ ಭೀಕರ ಮತ್ತು ಹೇಡಿತನದ ದಾಳಿ ನಡೆಸಲಾಗಿದೆ ಎಂದು ವಿವರಿಸಿದ್ದಾರೆ. ನಿರಾಯುಧ ವ್ಯಕ್ತಿಗಳ ಮೇಲಿನ ಹಲ್ಲೆಯನ್ನು ಖಂಡಿಸಿದರು. ಅಬ್ದುಲ್ಲಾ ಅವರು ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರ ಕುಟುಂಬಗಳಿಗೆ ತಮ್ಮ ಸಂತಾಪ ವ್ಯಕ್ತಪಡಿಸಿದ್ದು, ಈ ಪ್ರದೇಶದಲ್ಲಿ ಸ್ಥಳೀಯೇತರ ಕಾರ್ಮಿಕರಿಗೆ ನ್ಯಾಯ ಮತ್ತು ಹೆಚ್ಚಿನ ಭದ್ರತೆ ಕೈಗೊಳ್ಳಲು ಸೂಚಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗಗಂಗೀರ್‌ನಲ್ಲಿ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇದು ಹೇಡಿತನದ “ಭೀಕರ” ಕೃತ್ಯ. ದಾಳಿಕೋರರನ್ನು ಬಿಡುವುದಿಲ್ಲ ಎಂದಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಜಮ್ಮು ಮತ್ತು ಕಾಶ್ಮೀರದ ಗಗಾಂಗಿರ್, ಸೋನಾಮಾರ್ಗ್‌ನಲ್ಲಿ ಅಮಾಯಕ ಕಾರ್ಮಿಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read