HomeKarnatakaಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕನಿಗೆ 6 ತಿಂಗಳು ಜೈಲು, 65 ಲಕ್ಷ ರೂ. ದಂಡ

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕನಿಗೆ 6 ತಿಂಗಳು ಜೈಲು, 65 ಲಕ್ಷ ರೂ. ದಂಡ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರಿಗೆ ಆರು ತಿಂಗಳು ಜೈಲು, 65 ಲಕ್ಷ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ.

ತಮ್ಮ ಮಗಳಿಗೆ ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ 65 ಲಕ್ಷ ರೂ. ಪಡೆದುಕೊಂಡು ಮಾಜಿ ಶಾಸಕ ನರಸಿಂಹ ಸ್ವಾಮಿ ವಂಚಿಸಿದ್ದಾರೆ. ಹಣ ವಾಪಸ್ ಕೊಟ್ಟಿಲ್ಲ. ಚೆಕ್ ಗಳು ಅಮಾನ್ಯಗೊಂಡಿದೆ ಎಂದು ಪ್ರಕಾಶ್ ಕುಮಾರ್ ದೂರು ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನರಸಿಂಹಸ್ವಾಮಿ ವಿರುದ್ಧದ ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರು ತಿಂಗಳು ಜೈಲು ಮತ್ತು 65 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ. ನರಸಿಂಹಸ್ವಾಮಿ ಪರ ವಕೀಲರು ಮೇಲ್ಮನವಿ ಸಲ್ಲಿಸುವ ಕುರಿತ ಮನವಿ ಹಾಗೂ ಜಾಮೀನು ಕೋರಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದರಿಂದ ಬಂಧನ ಭೀತಿಯಿಂದ ನರಸಿಂಹಸ್ವಾಮಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular