HomeKarnatakaBIG NEWS: ಇಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆಗಮನ

BIG NEWS: ಇಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆಗಮನ

ಹುಬ್ಬಳ್ಳಿ: ಒಂದೆಡೆ ಲೋಕಸಭಾ ಚುನಾವಣಾ ಕಾವು ಏರುತ್ತಿದೆ. ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕ್ರಣ ಖಂಡಿಸಿ ಹಂತಕನಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ ಜೋರಾಗಿದೆ. ಈ ಸಂದರ್ಭದಲ್ಲಿಯೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಇಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಹುಬ್ಬಳ್ಳಿಗೆ ಭೇಟಿ ನೀಡಲಿರುವ ಜೆ.ಪಿ.ನಡ್ಡಾ ವಿವಿಧ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ಜೆ.ಪಿ.ನಡ್ಡಾ, ರಾತ್ರಿ 10 ಗಂಟೆಯವರೆಗೂ ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್ ನಲ್ಲಿ ವಿವಿಧ ಸಮುದಾಯಗಳ ಮುಖಂಡರನ್ನು ಭೇಟಿಯಾಗಲಿದ್ದಾರೆ. ಬಳಿಕ ವಿದ್ಯಾನಗರದ ಸಾಖರೆ ಶಾಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದು, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಮತಯಾಚಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular