ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ…!

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂನ್ 27ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ‌

ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಡಿಗ್ರಿ ಉತ್ತೀರ್ಣ ಹೊಂದಿರುವ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂರವಾಣಿ ಸಂಖ್ಯೆ 08182-255293 ಅಥವಾ ಮೊಬೈಲ್ ಸಂಖ್ಯೆ 9380663606 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read