HomeLatest Newsಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ನಿಧನ

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ನಿಧನ

ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ಕಿಮ್ ಫರ್ನಾಂಡಿಸ್ ಅನಾರೋಗ್ಯದಿಂದ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಿಮ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿದ್ದ ಅವರು ಚೇತರಿಸಿಕೊಳ್ಳದ ಕಾಅರಣ, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಜಾಕ್ವೆಲಿನ್ ಹಾಗೂ ಅವರ ತಂದೆ ಎಲ್ರಾಯ್ ಫರ್ನಾಂಡಿಸ್ ಜೊತೆಗಿದ್ದರು.

ಕೆಲ ದಿನಗಳಿಂದ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕಿಮ್ ಫರ್ನಾಂಡಿಸ್ ವಿಧಿವಶರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲೇಷಿಯಾ ಮೂಲದ ಕಿಮ್ ಫರ್ನಾಂಡಿಸ್ ಗಗನಸಖಿಯಾಗಿ ಕಾರ್ಯನಿರ್ವಹಿಸಿದ್ದರು. 1980ರಲ್ಲಿ ಶ್ರೀಲಂಕಾ ಮೂಲದ ಎಲ್ರಾಯ್ ಫರ್ನಾಂಡಿಸ್ ಅವರನ್ನು ವಿವಾಹವಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular