HomeLatest NewsBIG NEWS: ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರು: ಎರಡು ಬಾರಿ ಪ್ರಜ್ಞೆ ತಪ್ಪಿದ ಬಳಿಕ ಏಮ್ಸ್...

BIG NEWS: ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರು: ಎರಡು ಬಾರಿ ಪ್ರಜ್ಞೆ ತಪ್ಪಿದ ಬಳಿಕ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಗದೀಪ್ ಧನಕರ್ ಅವರು ಎರಡು ಬಾರಿ ಪ್ರಜ್ಞೆ ತಪ್ಪಿದ್ದರು. ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.

ವೈದ್ಯಕೀಯ ತಪಾಸಣೆಯ ಭಾಗವಾಗಿ ಅವರಿಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಶನಿವಾರ ಮನೆಯಲ್ಲಿ ಶೌಚಾಲಯಕ್ಕೆ ತೆರಳಿದ್ದಾಗ ಎರಡು ಬಾರಿ ಪ್ರಜ್ಞೆ ತಪ್ಪಿದ್ದರು. ಹಾಗಾಗಿ ಅವರಿಗೆ ವೈದ್ಯಕೀಯ ತಪಾಸಣೆಗೆ ಸೂಚಿಸಲಾಗಿತ್ತು. ತಪಾಸಣೆ ಬಳಿಕ ಎರಡು ದಿನ ವಿಶ್ರಾಂತಿ ಪಡೆದಿದ್ದರು. ಇಂದು ಕೂಡ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular