HomeKarnatakaBreaking News: ನಟಿ ಅಮೂಲ್ಯ ಪತಿಗೆ ಮಹತ್ವದ ಹುದ್ದೆ ನೀಡಿದ ಬಿಜೆಪಿ

Breaking News: ನಟಿ ಅಮೂಲ್ಯ ಪತಿಗೆ ಮಹತ್ವದ ಹುದ್ದೆ ನೀಡಿದ ಬಿಜೆಪಿ

ಕರ್ನಾಟಕ ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿದೆ. ಈ ಕುರಿತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಎ.ಆರ್.ಸಪ್ತಗಿರಿ ಗೌಡ ಆದೇಶವನ್ನು ಹೊರಡಿಸಿದ್ದಾರೆ.

ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ಜಗದೀಶ್ ಆರ್. ಚಂದ್ರ ನೇಮಕ ಮಾಡಲಾಗಿದೆ. ಜಗದೀಶ್ ನಟಿ ಅಮೂಲ್ಯ ಪತಿ. ಬಿಜೆಪಿ ಮೂಲಕ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

ನಟಿ ಅಮೂಲ್ಯ ಮಾವ, ಪತಿ ಇಬ್ಬರು ಸಹ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಈಗ ಜಗದೀಶ್ ಆರ್. ಚಂದ್ರ ಅವರಿಗೆ ಮಹತ್ವದ ಹುದ್ದೆ ನೀಡುವ ಮೂಲಕ ಪಕ್ಷ ಅವರಿಗೆ ದೊಡ್ಡ ಜವಾಬ್ದಾರಿಯನ್ನು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವಿಧ ಮೋರ್ಚಾಗಳ ಅಧ್ಯಕ್ಷರು

  • ಯುವ ಮೋರ್ಚಾ – ಜಗದೀಶ್ ಆರ್. ಚಂದ್ರ
  • ಮಹಿಳಾ ಮೋರ್ಚಾ – ನೀತಾ ಎಂ.ಎನ್.ರೆಡ್ಡಿ
  • ಎಸ್‌.ಸಿ.ಮೋರ್ಚಾ – ಮುನಿಯಲ್ಲಪ್ಪ
  • ಹಿಂದುಳಿದ ವರ್ಗಗಳ ಮೋರ್ಚಾ – ಹೆಚ್.ಆರ್.ಕೃಷ್ಣಪ್ಪ
  • ಎಸ್‌.ಟಿ.ಮೋರ್ಚಾ – ಗಿರೀಶ್ ಕುಮಾರ್ ಬಿ.
  • ರೈತ ಮೋರ್ಚಾ – ರುದ್ರಪ್ಪ ವೈ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular