BIG NEWS: ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಟಿಕೆಟ್ ಫೈನಲ್; ಬಿಜೆಪಿ ನಾಯಕರಿಂದಲೇ ವಿರೋಧ

ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಬಿಜೆಪಿ ಲೋಕಸಭಾ ಟಿಕೆಟ್ ಫೈನಲ್ ಆಗಿದೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಸಂಸದೆ ಮಂಗಳಾ ಅಂಗಡಿ ತಿಳಿಸಿದ್ದಾರೆ. ಶೆಟ್ಟರ್ ಗೆ ಬೆಳಗಾವಿ ಟಿಕೆಟ್ ಎಂಬ ಮಾತು ಕೇಳುತ್ತಿದ್ದಂತೆ ಸ್ಥಳೀಯ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಅಭಯ್ ಪಾಟೀಲ್, ನಮ್ಮಲ್ಲಿ ಸ್ಥಳೀಯವಾಗಿ ಅನೇಕ ನಾಯಕರು ಸ್ಪರ್ಧೆಗೆ ಸಮರ್ಥರಿದ್ದಾರೆ. ಹಾಗಾಗಿ ರಾಷ್ಟ್ರೀಯ ನಾಯಕರು ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಯಾವ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.

ನಮ್ಮ ಜಿಲ್ಲೆಯವರೇ ಅಭ್ಯರ್ಥಿಗಳಾಗಬೇಕು ಎಂಬುದು ನಮ್ಮ ಅಪೇಕ್ಷೆ. ನಮ್ಮ ಜಿಲ್ಲೆಯಲ್ಲಿ ಸಾಕಷ್ಟು ಜನ ಸಮರ್ಥರಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬೆಳಗಾವಿ ಲೋಕಸಭೆಗೆ ಸಾಕಷ್ಟು ಜನ ಟಿಕೆಟ್ ಆಕಾಂಕ್ಷಿಗಳಿದ್ದಾರೆ.ಯಾರೂ ಫೈನಲ್ ಆಗಿಲ್ಲ. ನಮ್ಮ ನಾಯಕರು ಅಧಿಕೃತವಾಗಿ ಯಾರನ್ನೂ ಘೋಷಿಸಿಲ್ಲ. ಟಿಕೆಟ್ ಘೋಷಣೆಗೂ ಮುನ್ನ ಯಾವುದೇ ಪ್ರತಿಕ್ರಿಯೆ ಸರಿಯಲ್ಲ ಎಂದರು.

ಇನ್ನೊಂದೆಡೆ ಬಿಜೆಪಿ ಹಿರಿಯ ನಾಯಕ ಪ್ರಭಾಕರ್ ಕೋರೆ ನಿವಾಸದಲ್ಲಿ ಬೆಳಗಾವಿ ಬಿಜೆಪಿ ನಾಯಕರು ರಹಸ್ಯ ಸಭೆ ಕೂಡ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read