HomeKarnatakaBIG NEWS: ಜಗದೀಶ್ ಶೆಟ್ಟರ್ ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ; ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ

BIG NEWS: ಜಗದೀಶ್ ಶೆಟ್ಟರ್ ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ; ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಶೆಟ್ಟರ್ ರಾಜೀನಾಮೆ ಪತ್ರ ನನಗೆ ಬಂದಿಲ್ಲ. ನಾನು ಕಾಂಗ್ರೆಸ್ ಗೆ ದ್ರೋಹ ಮಾಡಲ್ಲ ಅಂತ ಹೇಳಿದ್ದರು. ಈಗ ಇದ್ದಕ್ಕಿದ್ದಂತೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ವಿ, ಎಂಎಲ್ ಸಿ ಸ್ಥಾನ ನೀಡಿದೆವು. ಈಗ ಪಕ್ಷದ ವಿಶ್ವಾಸಕ್ಕೆ ಧಕ್ಕೆ ತಂದು ಬಿಜೆಪಿಗೆ ಹೋಗಿದ್ದಾರೆ. ಒತ್ತಡ, ಬಲವಂತದಿಂದ ಕರೆದುಕೊಂಡು ಹೋಗಿದ್ದಾರೋ ಏನೋ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದ ಹಿತಕ್ಕಾಗಿ ಬಿಜೆಪಿ ಸೇರ್ಪಡೆ ಎಂದು ಈಗ ಜಗದೀಶ್ ಶೆಟ್ಟರ್ ಹೇಳುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ತಪ್ಪಿಸಿದ್ರಲ್ಲಾ ಆಗ ಗೊತ್ತಾಗಲಿಲ್ವಾ ಅವರುಗೆ ದೇಶದ ಹಿತ? ಎಂದು ಪ್ರಶ್ನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular