HomeKarnatakaಹಾಲಿ ಬಿಜೆಪಿ ಶಾಸಕರಲ್ಲಿ ಕೆಲವರಿಗೆ ಟಿಕೆಟ್ ತಪ್ಪುತ್ತಾ…? ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಹತ್ವದ ಹೇಳಿಕೆ

ಹಾಲಿ ಬಿಜೆಪಿ ಶಾಸಕರಲ್ಲಿ ಕೆಲವರಿಗೆ ಟಿಕೆಟ್ ತಪ್ಪುತ್ತಾ…? ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಇಂದು ರಾತ್ರಿಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದೆ. ರಾತ್ರಿಯೇ ಮೊದಲ ಪಟ್ಟಿ ಬಿಡುಗಡೆಯಾಗುವ ಮಾಹಿತಿ ಇದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶೆಟ್ಟರ್. ಕೆಲವು ಶಾಸಕರಿಗೆ ವಿರೋಧಿ ಅಲೆ, ಆರೋಗ್ಯ ಸಮಸ್ಯೆ ಇರುತ್ತದೆ. ಹಾಗಾಗಿ ಟಿಕೆಟ್ ಕೈ ತಪ್ಪುತ್ತದೆ ಎಂಬ ಚರ್ಚೆ ಇರುತ್ತದೆ ಎಂದರು.

ಧಾರವಾಡದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಬಗ್ಗೆ ಮಾತನಾಡಿದ ಶೆಟ್ಟರ್, ಈ ಕುರಿತು ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ಬಾರಿ ನಾನು ಸ್ಪರ್ಧೆ ಮಾಡುತ್ತೇನೆ. ಎಲ್ಲದಕ್ಕೂ ಇಂದು ರಾತ್ರಿ ಉತ್ತರ ಸಿಗಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular