HomeKarnatakaಸಚಿವ ಸೋಮಣ್ಣ ಪಕ್ಷ ಬಿಡಲ್ಲ, ಸುಮಲತಾ ಬೆಂಬಲ ಘೋಷಿಸಿರುವುದು ಬಿಜೆಪಿಗೆ ಬಂದಂತೆ: ಜಗದೀಶ್ ಶೆಟ್ಟರ್

ಸಚಿವ ಸೋಮಣ್ಣ ಪಕ್ಷ ಬಿಡಲ್ಲ, ಸುಮಲತಾ ಬೆಂಬಲ ಘೋಷಿಸಿರುವುದು ಬಿಜೆಪಿಗೆ ಬಂದಂತೆ: ಜಗದೀಶ್ ಶೆಟ್ಟರ್

ರಾಯಚೂರು: ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಸೋಮಣ್ಣ ಅವರು ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಶೆಟ್ಟರ್, ನಿನ್ನೆಯೂ ಸೋಮಣ್ಣ ಅವರೊಂದಿಗೆ ಮಾತನಾಡಿದ್ದೇನೆ. ಅವರು ಪಕ್ಷದ ಆಸ್ತಿಯಾಗಿದ್ದಾರೆ. ಏನೇ ಸಮಸ್ಯೆ ಇದ್ದರೂ ನಾವು ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಸದೆ ಸುಮಲತಾ ಬೆಂಬಲ ಘೋಷಿಸಿರುವುದು ನೇರವಾಗಿ ಬಿಜೆಪಿಗೆ ಬಂದಂತೆ. ಲೋಕಸಭೆಯಲ್ಲಿಯೂ ಸಂಸದೆ ಸುಮಲತಾ ಅವರು ನಮಗೆ ಬೆಂಬಲ ಕೊಟ್ಟಿದ್ದಾರೆ. ಸರ್ಕಾರ ಮಂಡಿಸಿದ ಬಿಲ್ ಗಳಿಗೆ ಬೆಂಬಲ ನೀಡಿದ್ದಾರೆ. ಸುಮಲತಾ, ಅಂಬರೀಶ್ ಶಕ್ತಿಯಿಂದ ಬಿಜೆಪಿಗೆ ಹೆಚ್ಚಿನ ಬಲ ಬರುತ್ತದೆ. ಬೇರೆ ಬೇರೆ ಪಕ್ಷದವರು ಕೂಡ ಬಿಜೆಪಿ ಸೇರುತ್ತಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular