HomeKarnatakaವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಚಿಂಚನಸೂರ್ ಗೆ ಕೈತಪ್ಪಿದ ಟಿಕೆಟ್

ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಚಿಂಚನಸೂರ್ ಗೆ ಕೈತಪ್ಪಿದ ಟಿಕೆಟ್

ಬೆಂಗಳೂರು: ವಿಧಾನಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್, ತಿಪ್ಪಣ್ಣಪ್ಪ ಕಮಕನೂರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಟಿಕೆಟ್ ಆಕಾಂಕ್ಷಿಯಾಗಿದ್ದ ಬಾಬುರಾವ್ ಚಿಂಚನಸೂರ್ ಅವರಿಗೆ ಟಿಕೆಟ್ ಕೈತಪ್ಪಿದೆ. ಚಿಂಚನಸೂರ್ ಬದಲಿಗೆ ತಿಪ್ಪಣ್ಣಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಕೋಲಿ ಸಮಾಜದ ಮುಖಂಡ ತಿಪ್ಪಣ್ಣಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಪರಾಭವಗೊಂಡಿದ್ದ ಜಗದೀಶ್ ಶೆಟ್ಟರ್ ಅವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ವಿಧಾನ ಪರಿಷತ್ ನಲ್ಲಿ ಖಾಲಿಯಾದ 3 ಸ್ಥಾನಗಳಿಗೆ ಜೂನ್ 30 ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದೆ. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರು ಮತ್ತು ಆರ್. ಶಂಕರ್ ಅವರು ವಿಧಾನಸಭೆ ಚುನಾವಣೆಗೆ ಮುನ್ನ ರಾಜೀನಾಮೆ ನೀಡಿದ್ದರಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಮೂರೂ ಸ್ಥಾನಗಳನ್ನು ಗೆಲ್ಲಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular