HomeKarnatakaವಿಧಾನ ಪರಿಷತ್ ಗೆ ಜಗದೀಶ್ ಶೆಟ್ಟರ್, ಬೋಸರಾಜು, ಚಿಂಚನಸೂರುಗೆ ಕಾಂಗ್ರೆಸ್ ಟಿಕೆಟ್...?

ವಿಧಾನ ಪರಿಷತ್ ಗೆ ಜಗದೀಶ್ ಶೆಟ್ಟರ್, ಬೋಸರಾಜು, ಚಿಂಚನಸೂರುಗೆ ಕಾಂಗ್ರೆಸ್ ಟಿಕೆಟ್…?

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಖಾಲಿಯಾದ 3 ಸ್ಥಾನಗಳಿಗೆ ಜೂನ್‌ 30 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ನಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಚಿಂಚನಸೂರು ಹಾಗೂ ಬೋಸರಾಜು ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಎನ್.ಎಸ್. ಬೋಸರಾಜು ಮತ್ತು ಬಾಬುರಾವ್ ಚಿಂಚನಸೂರು ಅವರನ್ನು ಕಾಂಗ್ರೆಸ್ ನಿಂದ ಕಣಕ್ಕಿಳಿಸುವುದು ಬಹುತೇಕ ಅಂತಿಮವಾಗಿದೆ. ಮತ್ತೊಂದು ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರು ಮತ್ತು ಆರ್. ಶಂಕರ್ ಅವರು ವಿಧಾನಸಭೆ ಚುನಾವಣೆಗೆ ಮುನ್ನ ರಾಜೀನಾಮೆ ನೀಡಿದ್ದರಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆಲ್ಲಲಿದೆ.

ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದೆ. ಸಚಿವರಾಗಿರುವ ಎನ್.ಎಸ್. ಬೋಸರಾಜು ಅವರಿಗೆ ಟಿಕೆಟ್ ಖಚಿತವಾಗಿದ್ದು, ಬಾಬುರಾವ್ ಚಿಂಚನಸೂರು ಮತ್ತು ಜಗದೀಶ್ ಶೆಟ್ಟರ್ ಅವರಿಗೂ ಅವಕಾಶ ನೀಡಲು ಪಕ್ಷದ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular