ಸಿಡಿದಿದ್ದ ಮಾಜಿ ಸಿಎಂ ಶೆಟ್ಟರ್: ಬಿಜೆಪಿ ಟಿಕೆಟ್ ಕೈತಪ್ಪಿದ್ರೂ ಸ್ಪರ್ಧೆ ಖಚಿತ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಶೆಟ್ಟರ್ ಪತ್ನಿ ಶಿಲ್ಪಾ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ.

ಒಂದು ಕಡೆ ಜಗದೀಶ್ ಶೆಟ್ಟರ್ ಮತ್ತೊಂದು ಕಡೆ ಶೆಟ್ಟರ್ ಪತ್ನಿ ಶಿಲ್ಪಾ ಅವರು ಪಾಲಿಕೆಯ ಮಹಿಳಾ ಸದಸ್ಯರು, ಅಭಿಮಾನಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ನಿವಾಸದಲ್ಲಿ ಸಭೆ ನಡೆಸಲಾಗಿದೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಶೆಟ್ಟರ್ ಮನೆ ಮುಂದೆ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಮತ್ತೊಮ್ಮೆ ಶೆಟ್ಟರ್ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.

ಹುಬ್ಬಳ್ಳಿ -ಧಾರವಾಡ ಪಾಲಿಕೆಯ ಕೆಲವು ಸದಸ್ಯರು ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬೆಂಬಲಿಗದಿರಿಂದ ರಾಜೀನಾಮೆ ನೀಡಲು ಚಿಂತನೆ ನಡೆದಿದೆ. ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿದರೆ ರಾಜೀನಾಮೆ ನೀಡಲು ಶೆಟ್ಟರ್ ಬೆಂಬಲಿಗ ಕಾರ್ಪೊರೇಟರ್ ಗಳು ನಿರ್ಧಾರ ಕೈಗೊಂಡಿದ್ದಾರೆ.

ಟಿಕೆಟ್ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ವೀರೇಶ್ ಮತ್ತು ಸದಸ್ಯರೊಂದಿಗೆ ಜಗದೀಶ್ ಶೆಟ್ಟರ್ ಸಭೆ ನಡೆಸಿದ್ದಾರೆ.

ಬಿಜೆಪಿಗೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎನ್ನುವುದು ಶುದ್ಧ ಸುಳ್ಳು. ನನ್ನ ಲೆಟರ್ ಹೆಡ್ ನಲ್ಲಿ ಯಾರೋ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ನಾನು ಯಾವುದೇ ಪತ್ರ ಬರೆದಿಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read