HomeKarnatakaಸೋತರೂ ನೂತನ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ…?

ಸೋತರೂ ನೂತನ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ…?

ಬೆಂಗಳೂರು: ಬಿಜೆಪಿ ಟಿಕೆಟ್ ಸಿಗದೇ ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಸೇರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಕ್ಷೇತ್ರದಲ್ಲೇ ಸೋಲು ಕಂಡಿದ್ದಾರೆ.

ಬೆಂಗಳೂರಿಗೆ ಬರುವಂತೆ ಜಗದೀಶ್ ಶೆಟ್ಟರಿಗೆ ಕಾಂಗ್ರೆಸ್ ನಾಯಕರು ಬುಲಾವ್ ನೀಡಿದ್ದಾರೆ. ಚುನಾವಣೆಯಲ್ಲಿ ಸೋಲು ಕಂಡಿರುವ ಶೆಟ್ಟರ್ ಅವರಿಗೆ ಬೆಂಗಳೂರಿಗೆ ಬರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬುಲಾವ್ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದ್ದರೂ ಸೋಲಿಗೆ ಕಾರಣವೇನೆಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಜೆ ಶಾಸಕಾಂಗ ಸಭೆ ಹಿನ್ನೆಲೆಯಲ್ಲಿ ಶೆಟ್ಟರ್ ಗೆ ಕರೆ ಮಾಡಿ ಬೆಂಗಳೂರಿಗೆ ಬರಲು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ಬೆಂಗಳೂರಿನ ಪ್ರಯಾಣ ಬೆಳೆಸಿದ್ದಾರೆ.

ಶೆಟ್ಟರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಅವರಿಗೆ ನೂತನ ಸರ್ಕಾರದಲ್ಲಿ ಸ್ಥಾನ ಮಾನ ನೀಡುವ ಕುರಿತಾಗಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular