HomeKarnatakaಎಲೆಕ್ಷನ್ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಮಾಜಿ ಸಿಎಂ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ

ಎಲೆಕ್ಷನ್ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಮಾಜಿ ಸಿಎಂ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆಳಗ್ಗೆ 8:15ಕ್ಕೆ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ನಿನ್ನೆ ಸ್ಪೀಕರ್ ಕಾಗೇರಿಯವರನ್ನು ಭೇಟಿಯಾಗಿ ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಶಾಮನೂರು ಶಿವಶಂಕರಪ್ಪ ಅವರ ವಿಮಾನದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿ ರಾತ್ರಿಯೆಲ್ಲ ಕಾಂಗ್ರೆಸ್ ನಾಯಕರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೇವಾಲಾ, ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಸೇರಿದಂತೆ ಹಲವು ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular