BREAKING NEWS: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಬೆಳಗಾವಿ: ಲೋಕಸಭಾ ಚುನಾವಣಾ ಅಖಾಡ ಕಾವೇರಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಜಗದೀಶ್ ಶೆಟ್ಟರ್ ಬಳಿಕ ಚುನಾವಣಾಧಿಕಾರಿ‌ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಶಾಸಕರಾದ ಅಭಯ್ ಪಾಟೀಲ, ಬಾಲಚಂದ್ರ ಜಾರಕಿಹೊಳಿ‌ ಉಪಸ್ಥಿತರಿದ್ದರು.

ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶೆಟ್ಟರ್ 2ಲಕ್ಷ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read