HomeKarnatakaBIG NEWS: ವರಿಷ್ಠರು ಹೇಳಿದ್ರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ; ಮಾಜಿ ಸಿಎಂ ಜಗದೀಶ್ ಶೆಟ್ಟರ್

BIG NEWS: ವರಿಷ್ಠರು ಹೇಳಿದ್ರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ; ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಈ ನಡುವೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ವರಿಷ್ಠರು ಹೇಳಿದ್ರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಧಾರವಾಡ ಸೇರಿದಂತೆ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ಧ. ವರಿಷ್ಠರು ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷದ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಈ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷೆಯನ್ನು ಪರೋಕ್ಷವಾಗಿ ಹೊರಹಾಕಿದ್ದಾರೆ. ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಇತ್ತೀಚೆಗಷ್ಟೇ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮತ್ತೆ ಬಿಜೆಪಿಗೆ ವಾಪಾಸ್ ಆಗಿದ್ದಾರೆ. ಧಾರವಾಡ ಲೊಕಸಭಾ ಕ್ಷೇತ್ರಕ್ಕಾಗಿ ಶೆಟ್ಟರ್ ಲಾಭಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಧಾರವಾಡ ಕ್ಷೇತ್ರದ ಟಿಕೆಟ್ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾರಾಗಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular