ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಕಾಂಗ್ರೆಸ್ ನಾಯಕರಿಗೆ ಒಳಗೊಳಗೆ ಖುಷಿ ಎಂದ ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ತಕ್ಷಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಮುಡಾ ಹಗರಣ ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ನೇರ ಭಾಗಿಯಾಗಿದ್ದಾರೆ ಎಂಬುದು ಗೊತ್ತಿದೆ. ಹಾಗಾಗಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ಕೊಡಬೇಕು. ಇದರಲ್ಲಿ ಚಾಲೇಂಜ್ ಮಾಡುವುದು, ಹೋರಾಟ ಮಾಡುವುದರಲ್ಲಿ ಪ್ರಯೋಜನವಿಲ್ಲ ಎಂದರು.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನ ಹಲವು ನಾಯಕರಿಗೆ ಒಳಗೊಳಗೆ ಖುಷಿಯಾಗಿದೆ. ಹೊರಗಡೆ ನಾನು ಸಿಎಂ ಪರವಿದ್ದೇವೆ ಎನ್ನುತ್ತಿದ್ದಾರೆ ಅಷ್ಟೇ. ಮೊದಲು ಸಿಎಂ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read