HomeKarnatakaBIG NEWS: ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಜಗದೀಶ್ ಶೆಟ್ಟರ್ ಆಗ್ರಹ

BIG NEWS: ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಜಗದೀಶ್ ಶೆಟ್ಟರ್ ಆಗ್ರಹ

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಎಕಸದಸ್ಯ ಪೀಠ, ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಹಗರನಗಳ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಲಿ ಎಂದು ಮಾಜಿ ಸಿಎಂ, ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಸಿಎಂ ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ಮೊದಲು ರಾಜೀನಾಮೆ ನೀಡಲಿ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ರಾಜೀನಾಮೆ ಪಡೆಯಲಿ ಎಂದರು.

ಮುಡಾ ಹಗರಣ ಸಂಬಂಧ ಮೊದಲು ಸಿದ್ದರಾಮಯ್ಯನವರು ತನಿಖೆ ಎದುರಿಸಲಿ. ತಪ್ಪು ಮಾಡಿಲ್ಲ ಎಂಬುದು ಸಾಬೀತಾದ ಮೇಲೆ ಮತ್ತೆ ಮುಖ್ಯಮಂತ್ರಿಯಾಗಲಿ ಯಾರು ಬೇಡ ಎನ್ನುತ್ತಾರೆ. ಆದರೆ ಈಗ ಸಿದ್ದರಾಮಯ್ಯ ಮೇಲೆ ಆರೋಪ ಕೇಳಿಬಂದಿದೆ. ಹೈಕೋರ್ಟ್ ಕೂಡ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದೆ. ಇನ್ನೂ ಸಿಎಂ ಕುರ್ಚಿಯಲ್ಲಿ ಮುಂದುವರೆಯುವುದು ಸರಿಯಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular