HomeKarnatakaಬೀಗರಾದರೇನು ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ: ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಶಾಮನೂರು...

ಬೀಗರಾದರೇನು ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ: ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದು, ಬೀಗರಾದರೇನು ನಮ್ಮ ದಾರಿ ನಮಗೆ, ಅವರ ದಾರಿ ಅವರಿಗೆ ಎಂದು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಮಾತನಾಡಿ, ಜಗದೀಶ್ ಶೆಟ್ಟರ್ ಬಂದ್ರು ಹೋದ್ರು ಅಷ್ಟೇ. ಅವರು ಬಿಜೆಪಿಗೆ ಸೇರ್ಪಡೆಯಾದ ವಿಚಾರ ನನಗೆ ಗೊತ್ತಿಲ್ಲ. ಅವರು ಬೀಗರಾದರೇನು ನಮ್ಮ ದಾರಿ ನಮಗೆ ಅವರ ದಾರಿ ಅವರಿಗೆ ಎಂದು ತಿಳಿಸಿದ್ದಾರೆ.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಪ್ರಮುಖ ಪಾತ್ರ ವಹಿಸಿದ್ದರು. ಈಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular