HomeKarnatakaBIG NEWS: 'ಆಪರೇಷನ್ ಹಸ್ತ' ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿದ...

BIG NEWS: ‘ಆಪರೇಷನ್ ಹಸ್ತ’ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿದ ಬಿಜೆಪಿ ಚಾಣಾಕ್ಯ ಅಮಿತ್ ಶಾ; ಬಿಜೆಪಿ ತೊರೆದವರ ಮನವೊಲಿಕೆಗೆ ಯತ್ನ?

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ‘ಆಪರೇಷನ್ ಹಸ್ತ’ದ ಮೂಲಕ ಬಿಜೆಪಿ ಶಾಸಕರನ್ನು ಸೆಳೆಯಲು ಮುಂದಾಗಿದ್ದು, ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ, ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿದ್ದಾರೆ.

ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸೋತಿದ್ದರು. ಆ ನಂತರದಲ್ಲಿ ಕಾಂಗ್ರೆಸ್, ಜಗದೀಶ್ ಶೆಟ್ಟರ್ ಅವರಿಗೆ ಪರಿಷತ್ ಸದಸ್ಯ ಸ್ಥಾನ ನೀಡಿತ್ತು. ಇದೀಗ ಕಾಂಗ್ರೆಸ್ ನಲ್ಲಿ ಆಪರೇಷನ್ ಹಸ್ತ ಚರ್ಚೆ ಜೋರಾಗಿದ್ದು, ಈ ನಡುವೆ ಸ್ವತಃ ಅಮಿತ್ ಶಾ, ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ರಾತ್ರಿ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿರುವ ಅಮಿತ್ ಶಾ, ಸುಮಾರು 10 ನಿಮಿಷ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಬಿಜೆಪಿ ತೊರೆದ ನಾಯಕರ ಮನವೊಲಿಕೆಗೆ ಮುಂದಾದ್ರಾ? ಎಂಬ ಕುತೂಹಲ ಮೂಡಿದೆ.

 

For Latest News Updates, Join Our Whatsapp Community🚩
RELATED ARTICLES

Most Popular