BIG NEWS: ವಿಜಯೇಂದ್ರ ಅಧ್ಯಕ್ಷರಾದ ಮಾತ್ರಕ್ಕೆ ಲೋಕಸಭಾ ಚುನಾವಣೆಯಲ್ಲಿ ಚಮತ್ಕಾರ ನಡೆಯಲ್ಲ; ಬಿಜೆಪಿಗೆ ಟಾಂಗ್ ನೀಡಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ರಿಪೇರಿಯಾಗದಷ್ಟು ಹದಗೆಟ್ಟಿದೆ ಎಂದು ಮಾಜಿ ಸಿಎಂ, ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿದ ಮಾತ್ರಕ್ಕೆ ಲೋಕಸಭಾ ಚುನಾವಣೆಯಲ್ಲಿ ಚಮತ್ಕಾರ ನಡೆಯಲಿದೆ ಎಂದು ಭಾವಿಸುವ ಅವಶ್ಯಕತೆ ಇಲ್ಲ. ಯಾವ ಚಮತ್ಕಾರವೂ ನಡೆಯಲ್ಲ ಎಂದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಹೋರಾಡಿದರೂ 104 ಸ್ಥಾನ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 66 ಸೀಟುಗಳು ದಕ್ಕಿದ್ದವು. ಒಂದುವೇಳೆ ರಾಜ್ಯದಲ್ಲಿ ಈಗ ಚುನಾವಣೆ ನಡೆಸಿದರೂ ಬಿಜೆಪಿಗೆ 40 ಸ್ಥಾನ ಕೂಡ ಸಿಗಲ್ಲ ಎಂದು ವಾಗ್ದಾಳಿ ನಡೆಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read