HomeLatest NewsBIG NEWS: ರಾಜು ಕಾಗೆ ಸೇರಿ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರಲು ರೆಡಿ ಇದ್ದಾರೆ:...

BIG NEWS: ರಾಜು ಕಾಗೆ ಸೇರಿ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರಲು ರೆಡಿ ಇದ್ದಾರೆ: ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ

ಬೆಳಗಾವಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಇದು ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಶಾಸಕ ಬಿ.ಆರ್.ಪಾಟೀಲ್ ಬೆನ್ನಲ್ಲೇ ಶಾಸಕ ರಾಜು ಕಾಗೆ ಕೂಡ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ಬಿ.ಆರ್.ಪಾಟೀಲ್ ಹಾಗೂ ರಾಜ್ಯ್ ಕಾಗೆ ಹೇಳಿಕೆಗಳು ಸರಿಯಾಗಿಯೇ ಇದೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜು ಕಾಗೆ ಸೇರಿದಂತೆ ಬಹಳಷ್ಟು ಜನ ಕಾಂಗ್ರೆಸ್ ನವರು ಬಿಜೆಪಿಗೆ ಬರಲು ರೆಡಿ ಇದ್ದಾರೆ. ಅಲ್ಲಿನ ಇನ್ ಫೈಟಿಂಗ್ ಯಾವಾಗ ಸ್ಪೋಟ ಆಗುತ್ತೆ ಗೊತ್ತಾಗಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಬದಲಾವಣೆ ಆಗ್ತಾರೆ ಎಂಬುದು ಗೊತ್ತಿಲ್ಲ. ಆದರೆ ಸರ್ಕಾರ ಪತನವಾಗಲಿದೆ. ನಾವು ಕಾಂಗ್ರೆಸ್ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿಲ್ಲ‌. ಅವರೇ ಬರ್ತಾರೆ ಇದಕ್ಕೆ ಆಪರೇಷನ್ ಕಮಲ ಅಂತಾರೆ ಎಂದರು.

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ದಲ್ಲಿ ಮುಳುಗಿದೆ. ಯಾವ ಕೆಲಸಗಳು ಆಗುತ್ತಿಲ್ಲ. ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಈ ಬಗ್ಗೆ ನಾವಲ್ಲ ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular