BREAKING : ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ : ಬೆಂಗಳೂರಿನಲ್ಲಿ ಮೊಳಗಿದ ‘ಪ್ರಧಾನಿ ಮೋದಿ’ ಘೋಷಣೆ

ಬೆಂಗಳೂರು : ಚಂದ್ರಯಾನ-3 ಸಕ್ಸಸ್ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದಾರೆ. ನಂತರ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಹೊರಗಡೆ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂಬ ಘೋಷಣೆಯೊಂದಿಗೆ ಪ್ರಧಾನಿ ಮೋದಿ ಭಾಷಣ ಆರಂಭಿಸಿದ್ದಾರೆ. ಜೈ ಮೋದಿ ಎಂಬ ಘೋಷಣೆ ಕೂಗಲು ಮುಂದಾದಾಗ ಅದನ್ನು ತಡೆದು, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಮೋದಿ ಘೋಷಣೆ ಮಾಡಿದರು.

ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳಿಗೆ ಭೇಟಿಗೆ ಬಂದಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು. ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಮಿಷನ್ ಕಂಟ್ರೋಲ್ ಕಾಂಪ್ಲೆಕ್ಸ್ನಲ್ಲಿ ಚಂದ್ರಯಾನ-3 ಮಿಷನ್ನಲ್ಲಿ ಭಾಗಿಯಾಗಿರುವ ಇಸ್ರೋ ತಂಡದ ವಿಜ್ಞಾನಿಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read