ಪಾಕ್‌ ಆಟಗಾರ ಔಟ್‌ ಆದಾಗ ʼಜೈ ಶ್ರೀರಾಮ್’ ಘೋಷಣೆ; ಅಭಿಮಾನಿಗಳ ವರ್ತನೆಗೆ ಉದಯನಿಧಿ ಸ್ಟಾಲಿನ್ ಬೇಸರ

ಶನಿವಾರ ನಡೆದ ಭಾರತ- ಪಾಕಿಸ್ತಾನ ಐಸಿಸಿ ಕ್ರಿಕೆಟ್ ಪಂದ್ಯಾವಳಿ ವೇಳೆ ಪಾಕಿಸ್ತಾನ ಆಟಗಾರ ಔಟ್ ಆಗಿ ಡ್ರೆಸ್ಸಿಂಗ್ ರೂಂಗೆ ತೆರಳ್ತಿದ್ದಾಗ ಕ್ರಿಕೆಟ್ ಅಭಿಮಾನಿಗಳು ʼಜೈ ಶ್ರೀ ರಾಮ್ʼ ಎಂದು ಘೋಷಣೆ ಕೂಗಿದ್ದನ್ನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಖಂಡಿಸಿದ್ದಾರೆ.

ಅಭಿಮಾನಿಗಳ ಇತಹ ನಡೆ ಸ್ವೀಕಾರಾರ್ಹವಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಿನ್ನೆ ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್‌ಗೆ ತೆರಳುತ್ತಿದ್ದಾಗ ಪ್ರೇಕ್ಷಕರು “ಜೈ ಶ್ರೀ ರಾಮ್” ಘೋಷಣೆಗಳನ್ನು ಕೂಗುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳ ಈ ವರ್ತನೆ ವ್ಯಾಪಕ ಬಗ್ಗೆ ಬೇಸರ ವ್ಯಕ್ತವಾಗಿದೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಉದಯನಿಧಿ ಸ್ಟಾಲಿನ್, “ಭಾರತವು ತನ್ನ ಕ್ರೀಡಾ ಮನೋಭಾವ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಆದಾಗ್ಯೂ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಆಟಗಾರರ ಮೇಲೆ ತೋರಿದ ಇಂತಹ ವರ್ತನೆ ಸ್ವೀಕಾರಾರ್ಹವಲ್ಲ. ಕ್ರೀಡೆಗಳು ದೇಶಗಳ ನಡುವೆ ಬಲ, ನಿಜವಾದ ಸಹೋದರತ್ವವನ್ನು ಬೆಳೆಸುತ್ತಾ ಏಕೀಕರಣಗೊಳಿಸಬೇಕು. ಈ ರೀತಿ ದ್ವೇಷವನ್ನು ಹರಡುವ ಸಾಧನವಾಗಿ ಬಳಸುವುದು ಖಂಡನೀಯ.”ಎಂದಿದ್ದಾರೆ.

ಪಾಕಿಸ್ತಾನದ ಮುಹಮ್ಮದ್ ರಿಜ್ವಾನ್ 69 ಎಸೆತಗಳಲ್ಲಿ 49 ರನ್ ಗಳಿಸಿ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗುತ್ತಿದ್ದಾಗ ಪ್ರೇಕ್ಷಕರು “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುವುದನ್ನು ವೀಡಿಯೊದಲ್ಲಿ ಕಾಣಬಹುದು. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಕ್ರಿಕೆಟ್ ಅಭಿಮಾನಿಗಳ ಇಂತಹ ವರ್ತನೆಯನ್ನ ಖಂಡಿಸಿದ್ದಾರೆ.

ಭಾರತವು ಏಳು ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದ ನಂತರ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ, ಅಜಮ್‌ಗೆ ತಮ್ಮ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು.

https://twitter.com/Shirinkhan0/status/1713237691608015053

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read