ಜೈಲಾ…? ಬೇಲಾ..? ನಟ ದರ್ಶನ್ ಗ್ಯಾಂಗ್ ಗೆ ಇಂದು ಬಿಗ್ ಡೇ: ಸುಪ್ರೀಂ ಕೋರ್ಟ್ ಜಾಮೀನು ಭವಿಷ್ಯದ ತೀರ್ಪಿನತ್ತ ಎಲ್ಲರ ಚಿತ್ತ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ಧತಿ ಪ್ರಕರಣ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ದರ್ಶನ್ ಗೆ ಹೈಕೋರ್ಟ್ ನೀಡಿದ ಜಾಮೀನು ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಸದಸ್ಯ ಪೀಠ ವಾದ ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿದೆ.

ಕಳೆದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರ ಸಲ್ಲಿಸಿದ ದಾಖಲೆ ಪರಿಶೀಲಿಸಲಾಗಿದೆ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಕಾಣುತ್ತಿದೆ. ಜಾಮೀನು ನೀಡಲು ಒಂದು ಸಣ್ಣ ಅಂಶ ಸಿಕ್ಕರೆ ಸಾಕು ಎನ್ನುವಂತೆ ನಮಗೆ ಅನ್ನಿಸುತ್ತಿದೆ. ಹೈಕೋರ್ಟ್ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದು ನ್ಯಾಯಮೂರ್ತಿ ಪರ್ದಿವಾಲಾ ಅಭಿಪ್ರಾಯಪಟ್ಟಿದ್ದರು.

ಇಂದು ಜಾಮೀನು ಮುಂದುವರೆಸಬೇಕೆ ಅಥವಾ ರದ್ದು ಪಡಿಸಬೇಕೆಂಬುದರ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಲಿದ್ದು, ದರ್ಶನ್ ಮತ್ತು ಪ್ರಕರಣದ ಇತರೆ 7 ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read