HomeKarnatakaದೇವಸ್ಥಾನಗಳಲ್ಲಿ ಕಳವು ಮಾಡುತ್ತಿದ್ದ ಜೈಲು ವಾರ್ಡನ್ ಸೇರಿ ಮೂವರು ಅರೆಸ್ಟ್

ದೇವಸ್ಥಾನಗಳಲ್ಲಿ ಕಳವು ಮಾಡುತ್ತಿದ್ದ ಜೈಲು ವಾರ್ಡನ್ ಸೇರಿ ಮೂವರು ಅರೆಸ್ಟ್

ಗದಗ: ದೇವಾಲಯಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಅಮಾನತುಗೊಂಡ ಜೈಲು ವಾರ್ಡನ್ ಸೇರಿದಂತೆ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಅಮಾನತಾಗಿರುವ ಬಂಧಿಖಾಕಾನೆ ಇಲಾಖೆ ನೌಕರ ಶ್ರೀಕಾಂತ ಗುಡದೂರ, ಆತನ ಸಹಚರರಾದ ಪ್ರಸಾದ ಸಿಳ್ಳಿಕೇತರ, ಗುರುಪ್ರಸಾದ ಸಿಳ್ಳಿಕೇತರ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗದಗ, ಹಾವೇರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಯ ಹಲವು ದೇವಾಲಯಗಳಲ್ಲಿ ಕಳವು ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು, ಹರಪನಹಳ್ಳಿ, ಶಿವಮೊಗ್ಗ ಜಿಲ್ಲೆಯ ಆನವಟ್ಟಿ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದ ಸರಗಳ್ಳತನ ಪ್ರಕರಣಗಳಲ್ಲಿಯೂ ಈ ತಂಡ ಭಾಗಿಯಾಗಿರುವುದು ವಿಚಾರಣೆ ಸಂದರ್ಭದಲ್ಲಿ ಗೊತ್ತಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular