HomeKarnatakaBIG NEWS : 'ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಬರ್ಬರ ಹತ್ಯೆ' :...

BIG NEWS : ‘ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಬರ್ಬರ ಹತ್ಯೆ’ : ಭಯಾನಕ ಸತ್ಯ ಬಿಚ್ಚಿಟ್ಟ ಹಂತಕರು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಭಯಾನಕ ಸತ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಸ್ವಾಮೀಜಿಗೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್ ನೀಡಿ ನಂತರ ಕತ್ತು ಹಿಸುಕಿ ಕೊಲೆ ಮಾಡಿ ನಂತರ ತುಂಡು ತುಂಡಾಗಿ ಕತ್ತರಿಸಿದ್ದೇವೆ ಎಂದು ವಿಚಾರಣೆ ಬಾಯ್ಬಿಟ್ಟಿದ್ದಾರೆ.ಪ್ರಕರಣ ಸಂಬಂಧ ನಾರಾಯಣ ಮಾಳಿ (35) ಹುಸೇನ್(34) ಎಂಬ ಹಂತಕರನ್ನು ಬಂಧಿಸಲಾಗಿದ್ದು, ಶನಿವಾರ ಬೆಳಗ್ಗೆಯಿಂದ ಸಾಯಂಕಾಲದವರೆಗೆ ಕೊಳವೆಬಾವಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಶವವನ್ನು ಹೊರ ತೆಗೆಯಲಾಗಿದೆ. ಆರೋಪಿ ನಾರಾಯಣ ಸ್ವಾಮಿ ಜೈನಮುನಿಯಿಂದ 6 ಲಕ್ಷ ಹಣ ಪಡೆದಿದ್ದನು. ಇದನ್ನು ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಜುಲೈ 5 ರಂದು ಹಂತಕರು ಸ್ವಾಮೀಜಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಆರೋಪಿ ನಾರಾಯಣ ವಿದ್ಯುತ್ ಶಾಕ್ ನೀಡಿ ಕತ್ತು ಹಿಸುಕಿ ಸ್ವಾಮೀಜಿಯನ್ನು ಕೊಂದಿದ್ದಾನೆ. ನಂತರ ಹುಸೇನ್ ಗೆ ಕರೆ ಮಾಡಿ ಬರಲು ಹೇಳಿ, ಇಬ್ಬರು ಶವವನ್ನು ಬೈಕ್ ನಲ್ಲಿ ಸಾಗಿಸಿದ್ದಾರೆ. ಶವ ಹೂಳಿದರೆ ಪೊಲೀಸ್ ಕೈಗೆ ಸಿಕ್ಕಿ ಹಾಕಿಕೊಳ್ಳುತ್ತೇವೆ ಎಂದು ಸ್ವಾಮೀಜಿಯ ದೇಹವನ್ನು ಪೀಸ್ ಪೀಸ್ ಮಾಡಿ ಸೀರೆಯಲ್ಲಿ ಸುತ್ತಿ ಕೊಳವೆ ಬಾವಿಗೆ ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೂ ಇಂದು ಬೆಳಗ್ಗೆ 10.30 ಕ್ಕೆ ಹಿರೇಕೋಡಿಗೆ ಗ್ರಾಮದ ನಂದಿಪರ್ವತ ಆಶ್ರಮದ ಆವರಣದಲ್ಲಿ ಜೈನ ಸಂಪ್ರದಾಯದಂತೆ ಜೈನಮುನಿ ಸ್ವಾಮೀಜಿಗಳ ಅಂತ್ಯ ಸಂಸ್ಕಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular