BIG NEWS: ಜೈನಮುನಿ ಹತ್ಯೆ ಪ್ರಕರಣ : ನಂದಿಪರ್ವತ ಆಶ್ರಮಕ್ಕೆ ಕಟೀಲ್ ನೇತೃತ್ವದ ‘ಬಿಜೆಪಿ ಸತ್ಯಶೋಧನ ಟೀಂ’ ಭೇಟಿ

ಬೆಳಗಾವಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸತ್ಯಶೋಧನಾ ತಂಡ ಬೆಳಗಾವಿಯ ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲುಕಿನ ಹಿರೇಕೋಡಿಯಲ್ಲಿರುವ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ನಂದಿಪರ್ವತ ಆಶ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಇದೇ ವೇಳೆ ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ನಾಯಕರು, ಜೈನಮುನಿಗಳ ಪೂರ್ವಾಶ್ರಮದವರನ್ನೂ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಇದಕ್ಕೂ ಮುನ್ನ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ನಮ್ಮ ಸರಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸ್ ಇಲಾಖೆ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ಪ್ರಕರಣಗಳು ಪಾರದರ್ಶಕವಾಗಿ ತನಿಖೆ ನಡೆಸುವುದು ಅನುಮಾನ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read