ಜೈಪುರ ಗ್ಯಾಸ್ ಟ್ಯಾಂಕರ್ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಪರಿಹಾರ ಘೋಷಣೆ

ನವದೆಹಲಿ: ಜೈಪುರ ಅಗ್ನಿ ದುರಂತದ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳಿದ್ದಾರೆ.

ದುರಂತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಪ್ರತಿಯೊಬ್ಬ ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ಜೈಪುರ-ಅಜ್ಮೀರ್ ಮಾರ್ಗದಲ್ಲಿ ಎಲ್‌ಪಿಜಿ ಮತ್ತು ಇತರ ವಾಹನಗಳನ್ನು ಸಾಗಿಸುತ್ತಿದ್ದ ಟ್ಯಾಂಕರ್‌ಗೆ ರಾಸಾಯನಿಕಗಳನ್ನು ತುಂಬಿದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಜೈಪುರದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಎಸ್‌ಎಂಎಸ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಸುಶೀಲ್ ಕುಮಾರ್ ಭಾಟಿ ಅವರು, ಘಟನೆಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಅನೇಕರು ಶೇ. 60ಕ್ಕೂ ಹೆಚ್ಚು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಖಚಿತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read