ರಸ್ತೆ ದಾಟುವಾಗ ಡಿಕ್ಕಿ ಹೊಡೆದ ಕಾರು; ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗ್ತಿದೆ. ಮಹಾರಾಷ್ಟ್ರದಲ್ಲಿ ನಡೆದ ರಸ್ತೆ ಅಪಘಾತದ ವಿಡಿಯೋ ಒಂದು ಬಿಚ್ಚಿ ಬೀಳಿಸುತ್ತದೆ. ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಹಿಟ್ ಅಂಡ್ ರನ್ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವೇಗವಾಗಿ ಬಂದ ಕಾರು ಮಹಿಳೆಗೆ ಡಿಕ್ಕಿ ಹೊಡೆದಿದೆ.

26 ಸೆಕೆಂಡ್‌ಗಳ ವೀಡಿಯೊ ಕ್ಲಿಪ್‌ನಲ್ಲಿ ಜಲಗಾಂವ್‌ನಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿರುವುದನ್ನು ಕಾಣಬಹುದು. ಮಹಿಳೆ ಬೈಕ್‌ ಅಡ್ಡ ಬಂದ ಕಾರಣ ನಿಧಾನವಾಗಿ ರಸ್ತೆ ದಾಟುತ್ತಿದ್ದಾಳೆ. ಈ ವೇಳೆ ವೇಗವಾಗಿ ಬಂದ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದಿದೆ. ಮಹಿಳೆ ಕೆಳಗೆ ಬಿದ್ದಿದ್ದಾಳೆ.

ಡಿಕ್ಕಿ ಹೊಡೆದ ಕಾರು ಚಾಲಕ ಅಲ್ಲಿಂದ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಆದ್ರೆ ಮಹಿಳೆಗೆ ಡಿಕ್ಕಿ ಹೊಡೆದ ಕಾರಣ ನಿಯಂತ್ರಣ ತಪ್ಪಿದ್ದ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

https://twitter.com/mishika_singh/status/1823249550926033384

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read