BIG NEWS: ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಜೇಮ್ಸ್ ಅಂಡರ್ಸನ್

ಅತಿ ಹೆಚ್ಚು ವಿಕೆಟ್ ಕಬಳಿಸಿರುವ ಹೆಗ್ಗಳಿಕೆ ಹೊಂದಿರುವ ಇಂಗ್ಲೆಂಡ್ ಕ್ರಿಕೆಟ್ ದಂತಕಥೆ ಜೇಮ್ಸ್ ಅಂಡರ್ಸನ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ವೆಸ್ಟ್ ಇಂಡೀಸ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆಯುವ ಮೊದಲ ಟೆಸ್ಟ್ ಅವರ ಅಂತಿಮ ಪಂದ್ಯವಾಗಲಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ instagram ನಲ್ಲಿ ಜೇಮ್ಸ್ ಅಂಡರ್ಸನ್ ಪೋಸ್ಟ್ ಹಾಕಿದ್ದು, ಎಲ್ಲರಿಗೂ ನಮಸ್ಕಾರ, ಲಾರ್ಡ್ಸ್ ನಲ್ಲಿ ನಡೆಯುವ ಮೊದಲ ಟೆಸ್ಟ್ ನನ್ನ ಕೊನೆಯ ಟೆಸ್ಟ್ ಪಂದ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಇಂಗ್ಲೆಂಡ್ ತಂಡದ ಈ ವೇಗಿ ಈವರೆಗೂ 400 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಆಟವಾಡಿದ್ದು, ವಿವಿಧ ಸ್ವರೂಪದ ಕ್ರಿಕೆಟ್ ನಲ್ಲಿ ಒಟ್ಟು 987 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಅಲ್ಲದೆ 2015ರ ವಿಶ್ವಕಪ್ ನಲ್ಲಿ ಜೇಮ್ಸ್ ಅಂಡರ್ಸನ್ ತಮ್ಮ ಕೊನೆಯ ಏಕದಿನ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read