ಜಮ್ಮು – ಕಾಶ್ಮೀರ ಬಸ್ ದುರಂತ: ಪ್ರಧಾನಿ ಮೋದಿ ಪರಿಹಾರ ಘೋಷಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 36 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ.

ಬಸ್ ಕಿಶ್ತ್ವಾರ್‌ನಿಂದ ಜಮ್ಮುವಿಗೆ ಹೋಗುತ್ತಿತ್ತು. ಕನಿಷ್ಠ 55 ಪ್ರಯಾಣಿಕರು ಅದರಲ್ಲಿ ಪ್ರಯಾಣಿಸುತ್ತಿದ್ದರು. ಬಸ್‌ ನ ಓವರ್‌ ಲೋಡ್‌ ನಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಪ್ರಧಾನಿ ಮೋದಿ ಪರಿಹಾರ ಘೋಷಣೆ

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತ ದುಃಖಕರವಾಗಿದೆ. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ.ಗಳನ್ನು ನೀಡಲಾಗುತ್ತದೆ. ಗಾಯಗೊಂಡವರಿಗೆ 50,000 ರೂ.ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರಪತಿ ಸಂತಾಪ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ ಅಪಘಾತದಲ್ಲಿ ಹಲವಾರು ಪ್ರಯಾಣಿಕರ ಸಾವಿನ ಸುದ್ದಿಯಿಂದ ನಾನು ತುಂಬಾ ದುಃಖಿತಳಾಗಿದ್ದೇನೆ. ನಾನು ದುಃಖಿತ ಕುಟುಂಬ ಸದಸ್ಯರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.

https://twitter.com/PMOIndia/status/1724705451554800072

https://twitter.com/rashtrapatibhvn/status/1724711146882797717

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read