ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಜೊತೆ ಗುಂಡಿನ ಚಕಮಕಿ: ಪೊಲೀಸ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಕಾಗ್-ಮಂಡ್ಲಿ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಎನ್‌ಕೌಂಟರ್ ನಡೆದಿದೆ.

ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಕೊಲ್ಲಲ್ಪಟ್ಟರು ಮತ್ತು ಇನ್ನೊಬ್ಬರು ಗಾಯಗೊಂಡರು. ಹತ್ಯೆಗೀಡಾದ ಪೊಲೀಸ್ ಸಿಬ್ಬಂದಿಯನ್ನು ಹೆಚ್ ಸಿ ಬಶೀರ್ ಅಹಮದ್ ಎಂದು ಗುರುತಿಸಲಾಗಿದ್ದು, ಕರ್ತವ್ಯದ ವೇಳೆ ಪ್ರಾಣ ತ್ಯಾಗ ಮಾಡಿದ್ದಾರೆ.

ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಎರಡು ಕಡೆಯವರ ನಡುವೆ ಗುಂಡಿನ ಚಕಮಕಿ ನಡೆಯಿತು. ಪೊಲೀಸ್, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಒಳಗೊಂಡ ಜಂಟಿ ತಂಡವು ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಹೇಳಲಾಗಿದೆ.

ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read