ರಾಯಚೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಕನಡಿಗರು ಸೇರಿದಂತೆ 28 ಜನರು ಬಲಿಯಾಗಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಮ್ಮು-ಕಾಶ್ಮೀರ ಸರ್ಕಾರ ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದೆ. ಮೃತ ಕನ್ನಡಿಗರಿಗೆ ಕರ್ನಾಟಕ ಸರ್ಕಾರ ತಲಾ 10 ಲಕ್ಷ ಪರಿಹಾರ ಘೋಷಿಸಿದೆ. ಇದೇ ವೇಳೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠ ಕೂಡ ಪರಿಹಾರ ಘೋಷಿಸಿದೆ.
ಉಗ್ರರ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರಾದ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಕುಟುಂಬಕ್ಕೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದೆ.
ಈ ಬಗ್ಗೆ ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ ಘೋಷಿಸಿದ್ದು, ಮಂತ್ರಾಲಯ ಮಠದ ವತಿಯಿಂದ ಮೃತರ ಕುಟುಂಬಕ್ಕೆ ತಲಾ 1 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದಾರೆ.