ಶಿವಮೊಗ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಅಂತ್ರ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಮಂಜುನಾಥ್ ಅವರ ಪಾರ್ಥಿವ ಶರೀರಕ್ಕೆ ಅಮ್ತಿಮ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ಬಳಿಕ ಪೊಲೀಸರಿಂದ ಮೂರು ಸುತ್ತಿ ಕುಶಾಲತೋಪು ಸಿಡಿಸಿ ಅಂತಿಮ ಗೌರವ ನಮನ ಸಲ್ಲಿಸಲಾಯಿತು.
ಬಳಿಕ ತುಂಗಾನದಿಯ ದಡದಲ್ಲಿರುವ ರೋಟರಿ ಚಿತಾಗಾರದಲ್ಲಿ ಮಂಜುನಾಥ್ ಅವರ ಮಗ ಅಭಿಜೇಯ ತಂದೆಯ ಪಾರ್ಥಿವ ಶರೀರಕ್ಕೆ ಅಗ್ನಿಸಪರ್ಶ ಮಾಡಿದರು. ಪೊಲೀಸ್ ಗೌರವಗಳೊಂದಿಗೆ ಮಂಜುನಾಥ್ ಅವರ ಅಂತ್ಯಕ್ರಿಯೆ ನೆರವೇರಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಅಂತ್ಯಕ್ರಿಯೆಯಲ್ಲಿ ಸಚಿವ ಮಧು ಬಂಗಾರಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹಿರಿಯ ಅಧಿಕಾರಿಗಳು, ಕುಟುಂಬ ಸದಸ್ಯರು, ಸಂಬಂಧಿಕರು ಸೇರಿದಂತೆ ಸಾವಿರಾರು ಜನರು ಭಾಗಿಯಾಗಿದ್ದರು.