HomeIndiaBIG NEWS: ಕಂದಕಕ್ಕೆ ಉರುಳಿದ ಕಾರು: ಮಗು ಸೇರಿ ಐವರು ದುರ್ಮರಣ

BIG NEWS: ಕಂದಕಕ್ಕೆ ಉರುಳಿದ ಕಾರು: ಮಗು ಸೇರಿ ಐವರು ದುರ್ಮರಣ

ಶ್ರೀನಗರ: ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿ ಬಿದ್ದ ಪರಿಣಾಮ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.

ಥಾತ್ರಿಯಿಂದ ಕಥಾವಾಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿ ಐವರು ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ. ಗಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಮುಖ್ತಿಯಾರ್ ಅಹ್ಮದ್, ರಿಯಾಜ್ ಅಹ್ಮದ್, ಮೊಹಮ್ಮದ್ ರಫಿ, ಇರೀನಾ ಬೇಗಂ ಹಾಗೂ ನಾಲ್ಕು ವರ್ಷದ ಮಗು ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular