BREAKING: ಎಲ್‌ಇಟಿ ಭಯೋತ್ಪಾದಕ ಸಂಘಟನೆಯ ಸಹಚರ ಅರೆಸ್ಟ್: ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಟಿ/ಟಿಆರ್‌ಎಫ್‌ನೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ಸಹಚರನನ್ನು ಬಂಧಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಇಕೋ ಪಾರ್ಕ್ ಕ್ರಾಸಿಂಗ್‌ನಲ್ಲಿ ಆತನನ್ನು ಬಂಧಿಸಿದ್ದು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು, ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಕೋ ಪಾರ್ಕ್ ಕ್ರಾಸಿಂಗ್ ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಬಾರಾಮುಲ್ಲಾ ಪೋಲೀಸ್ ಮತ್ತು ಆರ್ಮಿ 46 ಆರ್ಆರ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.

ಪ್ರಾಥಮಿಕ ವಿಚಾರಣೆಯಲ್ಲಿ ಶಂಕಿತನನ್ನು ಶಾಕಿರ್ ಅಹ್ಮದ್ ಲೋನ್ ಎಂದು ಗುರುತಿಸಲಾಗಿದೆ. ಆತನಿಂದ ಒಂದು ಪಿಸ್ತೂಲ್, ಒಂದು ಮ್ಯಾಗಜೀನ್, ಎಂಟು ಪಿಸ್ತೂಲ್ ರೌಂಡ್‌ಗಳು ಮತ್ತು ಮೂರು ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಪಾಕಿಸ್ತಾನ ಮೂಲದ ಭಯೋತ್ಪಾದಕ ಹ್ಯಾಂಡ್ಲರ್‌ನೊಂದಿಗೆ ಸಂಪರ್ಕ ಹೊಂದಿದ್ದು, ಬಾರಾಮುಲ್ಲಾ ಪಟ್ಟಣದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯೋಜಿಸಿದ್ದನ್ನು ಬಹಿರಂಗಪಡಿಸಿದ್ದಾನೆ. ಯುಎ(ಪಿ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪಿಎಸ್ ಬಾರಾಮುಲ್ಲಾದಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read