ಶ್ರೀನಗರ: ಜಮ್ಮು-ಮ್ಮುಕಾಶ್ಮೀರದ ಉಂಧಂಪುರ ಹಾಗೂ ದೋಡಾ ಜಿಲ್ಲೆಗಳ ಗಡಿಯಲ್ಲಿ ಸೇನೆ ಹಾಗೂ ಪೊಲೀಸರು ಉಗ್ರರ ವಿರುದ್ಧ ಜಂಟಿ ಕಾರ್ಯಾಚಾರಣೆ ನಡೆಸಿದ್ದಾರೆ. ಭಯೋತ್ಪಾದಕರು ಹಾಗೂ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದೆ.
ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಭಾರತೀಯ ಸೇನೆ, ವಿಶೇಷ ಕಾರ್ಯಾಚರಣೆ ತಂಡ ಹಾಗೂ ಪೊಲೀಸರು ಸಿಯೋಜ್ ದಾರ್ ಎತ್ತರ ಪ್ರದೇಶದ ಗಡಿಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಶುಕ್ರವಾರ ರಾತ್ರಿಯಿಂದ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಗ್ರರ ವಿರುದ್ಧ ಎನ್ ಕೌಂಟರ್ ಕಾರ್ಯಾಚರಣೆ ಮುಂದುವರೆದಿದೆ. ಕಾರ್ಯಾಚರಣೆಯ ವೇಳೆ ಭಾರಿ ಪ್ರಮಾಣದ ಸ್ಫೋಟಕಗಳು, ಮದ್ದು, ಗುಂಡುಗಳನ್ನು ಸೇನೆ ವಶಕ್ಕೆ ಪಡೆದಿದೆ.