HomeIndiaBIG NEWS: ಉರಿ ಸೆಕ್ಟರ್ ನಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರು ಭದ್ರತಾ ಪಡೆಗಳ ಗುಂಡೇಟಿಗೆ...

BIG NEWS: ಉರಿ ಸೆಕ್ಟರ್ ನಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರು ಭದ್ರತಾ ಪಡೆಗಳ ಗುಂಡೇಟಿಗೆ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ.

ಬರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಎಲ್ ಒ ಸಿಯಲ್ಲಿ ಒಳನುಸುಳುತ್ತಿದ್ದ ಉಗ್ರರ ಪ್ರಯತ್ನವನ್ನು ಭದ್ರತಾ ಪಡೆಗಳ ಸಿಬ್ಬಂದಿ ವಿಫಲಗೊಳಿಸಿದ್ದು, ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.

ಉತ್ತರ ಕಾರ್ಶ್ಮೀರದ ಉರಿ ಸೆಕ್ಟರ್ ನ ಗೋಹಲ್ಲಾನ್ ಪ್ರದೇಶದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಲನವಲನವನ್ನು ಸೇನಾ ಸಿಬ್ಬಂದಿ ಗಮನಿಸಿತ್ತಿದ್ದಾರೆ. ಈ ವೇಳೆ ಇಬ್ಬರು ಉಗ್ರರು ಎಲ್ ಒಸಿ ಬಳಿ ಒಳನುಗ್ಗಲು ಯತ್ನಿಸಿದ್ದಾರೆ. ಪ್ರಶ್ನೆ ಮಾಡಿದ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸೇನಾ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಾಚರಣೆ ವೇಳೆ ಉಗ್ರರಿಂದ ಅಪಾರ ಮದ್ದುಗುಂಡುಗಳು, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular