ಇದು ನಮ್ಮ ರಾಷ್ಟ್ರದ ಚೈತನ್ಯದ ಮೇಲೆ ನಡೆದ ದಾಳಿ: ಮುಗ್ಧ ಪ್ರವಾಸಿಗರ ಮೇಲೆ ಕ್ರೂರ ದಾಳಿ ಖಂಡನೀಯ: ನಟ ಕಿಚ್ಚ ಸುದೀಪ್

ಬೆಂಗಳೂರು: ಜಮ್ಮು-ಕಾಶ್ಮೀರ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ 28 ಜನರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಭಯೋತ್ಪಾದಕರ ದಾಳಿಯನ್ನು ನಟ ಕಿಚ್ಚ ಸುದೀಪ್ ಕಟುಶಬ್ದಗಳಿಂದ ಖಂಡಿಸಿದ್ದಾರೆ.

ಪಹಲ್ಗಾಮ್ ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದಿರುವ ಕ್ರೂರ ದಾಳಿ ಹೃದಯವಿದ್ರಾವಕ ಘಟನೆ. ಇದು ಕೇವಲ ವ್ಯಕ್ತಿಗಳ ಮೇಲೆ ನಡೆದಿರುವ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲೆ ನಡೆಸಲಾಗಿರುವ ದಾಳಿ. ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡುವ ಸಮಯ ಎಂದಿದ್ದಾರೆ.

ಈ ಹೇಯ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಶೀಘ್ರವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read