ಶ್ರೀನಗರ: ಉಗ್ರರ ವಿರುದ್ಧ ಕಾರ್ಯಾಚಾರಣೆ ಚುರುಕುಗೊಳಿಸಿರುವ ಭಾರತೀಯ ಸೇನೆ ಜಮ್ಮು-ಕಾಶ್ಮೀರದಲ್ಲಿ ಇಂದು ಮತ್ತೆ ಮೂವರು ಉಗ್ರರನ್ನು ಸದೆಬಡಿದಿದೆ.
ಆಪರೇಷನ್ ಅಖಾಲ್ ಕಾರ್ಯಾಚರಣೆಯಲ್ಲಿ ಭಾನುವಾರ ಕೂಡ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆ ಶನಿವಾರ ಮೂವರು ಉಗ್ರರನ್ನು ಸದೆಬಡಿದಿತ್ತು. ಇದೀಗ ಭಾನುವಾರ ಸಹ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದ್ದು, ನಿನ್ನೆ ರಾತ್ರಿಯಿಡಿ ಗುಂಡಿನ ಸದ್ದು, ಸ್ಫೋಟಗಳು ನಡೆದಿವೆ. ಜಮ್ಮು-ಕಾಶ್ಮೀರ ಪೊಲೀಸರು, ಸೇನೆ, ಸಿಆರ್ ಪಿಎಫ್ ಜಂಟಿ ತಂಡದಿಂದ ಕಾರ್ಯಾಚರಣೆ ನಡೆದಿದ್ದು, ಮೂವರು ಉಗ್ರರು ಹತರಾಗಿದದರೆ. ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ. ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಯಾಗಿದೆ.