BIG NEWS: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.

ಜಮ್ಮು-ಕಾಶ್ಮೀರದ ಬಾರಾಮಲ್ಲಾದ ಸೋಪುರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕಿತ್ತು. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಮೃತ ಉಗ್ರರ ಪತ್ತೆ ಕಾರ್ಯಪ್ರಗತಿಯಲ್ಲಿದೆ. ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read