BIG NEWS: ಕಂದಕಕ್ಕೆ ಉರುಳಿದ ಬಸ್; 30 ಪ್ರಯಾಣಿಕರು ದುರ್ಮರಣ; ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಶ್ರೀನಗರ: ಪ್ರಯಾಣಿಕರ ಬಸ್ ಕಂದಕಕ್ಕೆ ಉರಿಳಿಬಿದ್ದ ಪರಿಣಾಮ 30 ಪ್ರಯಾಣಿಕರು ಸಾವನಪ್ಪಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರಂಗಲ್-ಅಸ್ಸಾರ್ ಬಳಿ ಬಸ್ ಸ್ಕಿಡ್ ಆಗಿ ಈ ದುರಂತ ಸಂಭವಿಸಿದೆ. ಬಸ್ 300 ಅಡಿ ಆಳದ ಕಂದಕಕ್ಕೆ ಬಿದ್ದಿದೆ.

ಬಸ್ ನಲ್ಲಿ 40 ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ 30 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸಾವಿನ ಸಂಖ್ಯೆ ಇನ್ನಷ್ಟು ಏರುವ ಆತಂಕ ಎದುರಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಹಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read